Home ಟಾಪ್ ಸುದ್ದಿಗಳು ಮಂಗಳೂರು: ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಜಖಂಗೊಳಿಸಿದ ಭಕ್ತರು

ಮಂಗಳೂರು: ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಜಖಂಗೊಳಿಸಿದ ಭಕ್ತರು

ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ದಕ್ಷಿಣ ಕನ್ನಡ: ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ.

ರಥ ಹೋಗುವ ದಾರಿಯಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ತಳ್ಳಿ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Join Whatsapp
Exit mobile version