Home ಟಾಪ್ ಸುದ್ದಿಗಳು ಮಂಗಳೂರು | ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು | ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಬೆಳ್ತಂಗಡಿಯ ಮಾಜಿ ಶಾಸಕ ದಿ.ವಸಂತ ಬಂಗೇರ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಸಿಎಂ ಬಜಪೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು,
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ… ಅಭಿವೃದ್ಧಿ ಶೂನ್ಯ.. ಎಂದು ಬಿಜೆಪಿಯವರು ಹೇಳುತ್ತಾರೆ. ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಅಭಿವೃದ್ಧಿ ಅಲ್ಲವೇ. ನಮ್ಮ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಕೆಲಸ ಕಾರ್ಯ ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ. ನೀವು ಸುಳ್ಳು ಹೇಳುತ್ತೀರಾ ಎಂದು ಪ್ರಶ್ನಿಸಿದರು.


ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ. ಅಂಬೇಡ್ಕರ್ ಅವರೂ ಇದೇ ಮಾತನ್ನು ಹೇಳಿದ್ದರು ಎಂದರು

Join Whatsapp
Exit mobile version