Home ಕರಾವಳಿ ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ಕೋಟೆಪುರ – ಬೆಂಗ್ರೆಯ ಅಳಿವ ಬಾಗಿಲಿನಲ್ಲಿ ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಹಫೀಝ್ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಶುಕ್ರವಾರದಿಂದ ನಾಪತ್ತೆಯಾಗಿದ್ದು, ಹಫೀಝ್ ನ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು .


ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ ಬಳಿ ಹಫೀಝ್ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅದರಂತೆ ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದರು. ಸದ್ಯ ಮೃತದೇಹ ಪತ್ತೆಯಾಗಿದೆ.

Join Whatsapp
Exit mobile version