ಮಂಗಳೂರು: ಮೊಬೈಲ್ ಬಳಸದಂತೆ ತಾಯಿ ಗದರಿಸಿದ ಹಿನ್ನೆಲೆಯಲ್ಲಿ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ.
ಜ್ಞಾನೇಶ್ (14) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಜ್ಞಾನೇಶ್ ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದಾರೆ, ಇದರಿಂದ ಬೇಸರಗೊಂಡ ಬಾಲಕ ರೂಮಿನೊಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನು ತಕ್ಷಣ ನೇಣು ಬಿಗಿದ ಶಾಲನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ತಿಳಿದು ಬಂದಿದೆ.