ಮಂಗಳೂರು | ಬಾಲಕನಿಗೆ ಲಾಠಿ ಏಟು: ” ಪೊಲೀಸರ ಅತಿರೇಕದ ವರ್ತನೆ” ಎಂದ ಸ್ಥಳೀಯರು

Prasthutha|

ಮಂಗಳೂರು: ತಣ್ಣೀರುಬಾವಿ ಬೀಚ್’ನಲ್ಲಿ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ವರದಿಯಾಗಿದ್ದು, “ಪೊಲೀಸರ ಅತಿರೇಕದ ವರ್ತನೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಬಾಲಕರ ಮೇಲೆ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಪೊಲೀಸರ ವಿರುದ್ದ ತಿರುಗಿಬಿದ್ದಿದ್ದಾರೆ.


ಹೊಸ ವರ್ಷ ಹಿನ್ನೆಲೆಯಲ್ಲಿ ತಣ್ಣೀರುಭಾವಿ ಬೀಚ್’ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಾಠಿ ಏಟಿನಿಂದ 6ನೇ ತರಗತಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp