Home ಕರಾವಳಿ ಮಂಗಳೂರು | ಬಾಲಕನಿಗೆ ಲಾಠಿ ಏಟು: ” ಪೊಲೀಸರ ಅತಿರೇಕದ ವರ್ತನೆ” ಎಂದ ಸ್ಥಳೀಯರು

ಮಂಗಳೂರು | ಬಾಲಕನಿಗೆ ಲಾಠಿ ಏಟು: ” ಪೊಲೀಸರ ಅತಿರೇಕದ ವರ್ತನೆ” ಎಂದ ಸ್ಥಳೀಯರು

ಮಂಗಳೂರು: ತಣ್ಣೀರುಬಾವಿ ಬೀಚ್’ನಲ್ಲಿ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ವರದಿಯಾಗಿದ್ದು, “ಪೊಲೀಸರ ಅತಿರೇಕದ ವರ್ತನೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಾಲಕರ ಮೇಲೆ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಪೊಲೀಸರ ವಿರುದ್ದ ತಿರುಗಿಬಿದ್ದಿದ್ದಾರೆ.


ಹೊಸ ವರ್ಷ ಹಿನ್ನೆಲೆಯಲ್ಲಿ ತಣ್ಣೀರುಭಾವಿ ಬೀಚ್’ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಾಠಿ ಏಟಿನಿಂದ 6ನೇ ತರಗತಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version