ಮಂಗಳೂರು | ಬಸ್ ಚಾಲಕನ ಸಮಯಪ್ರಜ್ಞೆ: ಕೂದಳೆಲೆ ಅಂತರದಲ್ಲಿ ಮಹಿಳೆ ಪವಾಡ ಸದೃಶ್ಯ ಪಾರು

Prasthutha|

ಉಳ್ಳಾಲ: ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪಾದಚಾರಿ ಮಹಿಳೆ ಕೂದಳೆಲೆ ಅಂತರದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ.

- Advertisement -


ಈ ಕುರಿತ ವೀಡಿಯೋ ವೈರಲ್ ಆಗಿದೆ.


ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

- Advertisement -


ವೀಡಿಯೋದಲ್ಲಿ ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ.