ಮಂಗಳೂರು| ವಿದ್ಯುತ್ ಕಂಬಕ್ಕೆ  ಕಾರು ಡಿಕ್ಕಿ; ಓರ್ವ ಮೃತ್ಯು, ಮೂವರಿಗೆ ಗಾಯ

Prasthutha|

ಮಂಗಳೂರು:ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ.

ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತ ಯುವಕ. ಗಾಯಾಳುಗಳನ್ನು ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

- Advertisement -

ಗಾಯಾಳುಗಳ ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಾರೆ. ನಾಲ್ವರೂ ಗೆಳೆಯರಾಗಿದ್ದು ಕೇರಳಕ್ಕೆ  ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -