ಮಂಗಳೂರು | ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಕಾಲಿಗೆ ಗುಂಡಿಕ್ಕಿದ ಸಿಸಿಬಿ ಇನ್ಸ್‌ಪೆಕ್ಟರ್ ರಫೀಕ್

Prasthutha|

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.

- Advertisement -

ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ತಲಪಾಡಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪ್ರಮುಖ‌ ಆರೋಪಿ ಕಣ್ಣನ್‌ ಮಣಿ ತಪ್ಪಿಸಲು ಯತ್ನಿಸಿ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಎನ್ನಲಾಗಿದೆ. ಆರೋಪಿ ದಾಳಿಗೆ ಯತ್ನಿಸಿದ ತಕ್ಷಣವೇ ಸಿಸಿಬಿ ಇನ್ಸ್ ಪೆಕ್ಟರ್ ರಫೀಕ್ ಆತನ ಕಾಲಿಗೆ ಎರಡು ಸುತ್ತು ಗುಂಡು ಹಾರಿಸಿರುವುದಾಗಿ ತಿಳಿದುಬಂದಿದೆ.

ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಈ ಘಟನೆ ನಡೆದಿದ್ದು, ಸದ್ಯ ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ಆರೋಪಿಯನ್ನು ದಾಖಲಿಸಿ‌ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

- Advertisement -

ಸಿಸಿಬಿ ಇನ್ಸ್ ಪೆಕ್ಟರ್ ರಫೀಕ್ ಅವರು ಈ ಹಿಂದೆಯೂ ಮಂಗಳೂರಿನ ಮತ್ತೊಂದು ಪ್ರಕರಣದಲ್ಲಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದರು‌. ದೀಪಕ್ ರಾವ್ ಕೊಲೆ‌ ಪ್ರಕರಣದ ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿ‌ ಸೆರೆ ಹಿಡಿದಿದ್ದರು. ಅಂದು ರಫೀಕ್ ಪಣಂಬೂರು ಠಾಣೆ ಇನ್ಸ್‌ಪೆಕ್ಟರ್ ಆಗಿದ್ದರು. ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು.



Join Whatsapp