ಮಂಗಳೂರು: ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಇಲ್ಲಿನ ನೆಹರೂ ಮೈದಾನದಲ್ಲಿ ಆಚರಿಸಲಾಯಿತು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.