ಮಂಗಳೂರು : ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ.
ಈ ಫ್ಯಾಕ್ಟರಿಯಲ್ಲಿ ಸುಮಾರು 80 ಮಂದಿ ಕೆಲಸಗಾರರಿದ್ದು ಆ ಪೈಕಿ 20 ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಮೋನಿಯಾ ಸೋರಿಕೆಯಿಂದಾಗಿ ಅಸ್ವಸ್ಥಗೊಂಡ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.