Home ಕರಾವಳಿ ಮಂಗಳೂರು | ಮತ್ತೆ ಅನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರು | ಮತ್ತೆ ಅನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ ಮತ್ತೆ ನಡೆದಿದೆ. ನಗರದ ಕದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಸಂಜೆಯ ವೇಳೆ ಕದ್ರಿ ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜೊಂದರ ಸಮೀಪದಲ್ಲಿ ಯುವ ಜೋಡಿಯೊಂದು ನಿಂತಿತ್ತು. ಈ ವೇಳೆ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರು ಜೋಡಿಗೆ ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವ ಜೋಡಿಯು ಸಂಘಪರಿವಾರದ ಕಾರ್ಯಕರ್ತರು ತಮ್ಮನ್ನು ಥಳಿಸಿ, ಬಳಿಕ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.

ಯುವ ಜೋಡಿಯನ್ನು ಥಳಿಸಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version