ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.