Home ಕರಾವಳಿ ಮಂಗಳೂರು ಕಾಲೇಜು ವಿದ್ಯಾರ್ಥಿನಿ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮಂಗಳೂರು ಕಾಲೇಜು ವಿದ್ಯಾರ್ಥಿನಿ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.


ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್.(22) ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಅಂಜನಾ ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.


ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಆಕಸ್ಮಿಕ ಸಾವೇ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಬೇಕಿದೆ

Join Whatsapp
Exit mobile version