ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

Prasthutha|

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದರು. ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ‌ ನೀಡಿದ್ದು, ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ.

Join Whatsapp