ಮಂಗಳೂರು: ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

Prasthutha|

ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ ಎಂದರು.

ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು ಎಂದ ಜಿಲ್ಲಾಧಿಕಾರಿ, ಇದರಲ್ಲಿ ನಿರ್ಲಕ್ಷ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ ಎಂದರು.

- Advertisement -

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರ ನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Join Whatsapp