ಮಂಗಳೂರು | ಸೆ.28ರಿಂದ ಶಾಲಾ ಮಕ್ಕಳಿಗೆ ದಸರಾ ರಜೆ

ಮಂಗಳೂರು: 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ 2022ರ ಸೆ.24ರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಸೂಚನೆಯಂತೆ ಸೆ.28ರಿಂದ ಅಕ್ಟೋಬರ್ 1ರ ವರೆಗೆ ಹೆಚ್ಚುವರಿಯಾಗಿ (4ದಿನಗಳು) ಷರತ್ತಿಗೊಳಪಟ್ಟು ದ.ಕ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ದಸರಾ ರಜೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಷರತ್ತು:

- Advertisement -
ಅಕ್ಟೋಬರ್ 02ರಂದು ಮಹಾತ್ಮಾಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಹೆಚ್ಚುವರಿಯಾಗಿ ನೀಡಿರುವ 04 ದಿನಗಳ ರಜೆಯನ್ನು 2022ರ ನವೆಂಬರ್ ತಿಂಗಳಿನಲ್ಲಿ 04 ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸುವಂತೆ ಆದೇಶಿಸಿರುತ್ತಾರೆ.
- Advertisement -