ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ
ವಿಧಾನ ಪರಿಷತ್ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಪ್ರಾರಂಭಗೊಂಡಿದೆ.
ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.
ಕಿಶೋರ್ ಬಿ.ಆರ್. (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ ( ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಕಣದಲ್ಲಿದ್ದಾರೆ.