ಮಂಗಳೂರು: ಮೀನುಗಾರನನ್ನು ಉಲ್ಟಾ ನೇತು ಹಾಕಿ, ಕೈಕಾಲು ಕಟ್ಟಿ ಹಲ್ಲೆ!

Prasthutha: December 23, 2021

ಮಂಗಳೂರು: ಮೊಬೈಲ್ ಕಳ್ಳತನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೀನುಗಾರನೋರ್ವನನ್ನು ತಲೆಕೆಳಗೆ ಮಾಡಿ ನೇತು ಹಾಕಿ, ಕೈಕಾಲು ಕಟ್ಟಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಧಕ್ಕೆ ಪ್ರದೇಶದಲ್ಲಿ ನಡೆದಿದೆ

ವೈಲ ಶೀನು ಈ ರೀತಿ ದೌರ್ಜನ್ಯಕ್ಕೊಳಗಾಗಿರುವ ಮೀನುಗಾರ ಎಂದು ತಿಳಿದುಬಂದಿದೆ.

ಈ ಘಟನೆ ನಡೆದು ಕೆಲವು ದಿನಗಳಾಗಿದೆ. ವೈಲ್​ ಶೀನು ಆಂಧ್ರಪ್ರದೇಶದ ಮೂಲದನಾಗಿದ್ದು, ಮಂಗಳೂರಿನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಮಂಗಳೂರಿನ ಧಕ್ಕೆಯಲ್ಲಿ ಮೀನುಗಾರರೊಬ್ಬರ ಮೊಬೈಲ್ ಕಳೆದು ಹೋಗಿತ್ತು. ಇದನ್ನು ವೈಲ ಶೀನು ಕದ್ದಿದ್ದಾನೆ ಎಂದು ಆರೋಪಿಸಿ ಆತನನ್ನು ಬೋಟ್ ನಲ್ಲಿ ಅಮಾನವೀಯವಾಗಿ ವಿಚಾರಿಸಿದ್ದಾರೆ. ಅಲ್ಲದೆ, ಬೋಟ್ ನಲ್ಲೇ ಆತನ ಕಾಲಿಗೆ ಹಗ್ಗಕಟ್ಟಿ ತಲೆಕೆಳಗು ಮಾಡಿ ನೇತುಹಾಕಿ ವಿಚಾರಣೆ ನಡೆಸಿದ್ದಾರೆ. ಇವರೆಲ್ಲರೂ ಆಂಧ್ರಪ್ರದೇಶ ಮೂಲದ ಕಾರ್ಮಿಕರಾಗಿದ್ದಾರೆ.

ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!