ಮಂಗಳೂರು: ಅಡ್ಯಾರ್ ಪದವು ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಐವರ ಬಂಧನ

Prasthutha: December 14, 2021

ಮಂಗಳೂರು: ಅಡ್ಯಾರ್ ಪದವಿನಲ್ಲಿ ರಿಕ್ಷಾ ಚಾಲಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಡಂತಿಲ ಕಾಪೆಟ್ಟು ಸೈಟ್ ನ ಗಣೇಶ್(23), ಬಂಟಕಟ್ಟಾ ಪಡು ನಿವಾಸಿ ಚೇತನ್ ಕುಮಾರ್(21), ಕಟ್ಟಿಂಜ ಸೈಟ್ ನ ಕೀರ್ತಿ ರಾಜ್(23), ನೀರು ಮಾರ್ಗ ರಂಗಪಾದೆಯ ಸುವೀತ್(19), ಬೊಂಡಂತಿಲದ ಪರೀಕ್ಷಿತ್(20) ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಲಂ 143, 147, 148, 341, 427, 324, 326, 307 ಮತ್ತು 149 ಐಪಿಸಿ ರಂತೆ ಪ್ರಕರಣ ದಾಖಲಿಸಲಾಗಿದೆ.   


ಅಡ್ಯಾರ್ ಪದವು ನಿವಾಸಿಯಾದ ಮುಹಮ್ಮದ್ ರಿಯಾಝ್ ಎಂಬವರು ಕಾರಿನಲ್ಲಿ ತಮ್ಮ ಮನೆಯ ಕಡೆಗೆ ತೆರಳುತ್ತಿದ್ದಾಗ 8ಜನರು ಸೇರಿಕೊಂಡು ವಾಹನವನ್ನು ಅಡ್ಡಗಟ್ಟಿ ಕೊಲೆ ಯತ್ನ ನಡೆಸಿದ್ದರು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!