ಮಂಗಳೂರು: ಕೆಪಿಟಿ ಜಂಕ್ಷನ್ ನಲ್ಲಿ ಫ್ಲೈಓವರ್ ನಿರ್ಮಾಣ: ಸಂಸದ ಕಟೀಲ್

Prasthutha|

ಮಂಗಳೂರು: ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

- Advertisement -


ಮಂಗಳೂರಿನ ಏರ್ ಪೋರ್ಟ್ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆ ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಬದಲಿ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹ ಕೇಳಿಬಂದಿತ್ತು. ಇದರಂತೆ ಇದೀಗ ಫ್ಲೈಓವರ್ ನಿರ್ಮಾಣಕ್ಕೆ ಪ್ರಾಧಿಕಾರವು ಅನುಮೋದನೆ ನೀಡಿದ್ದು ಈ ಮೂಲಕ ನಗರ ವ್ಯಾಪ್ತಿಯ ಬಹುದೊಡ್ಡ ಸಂಚಾರ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ತಿಳಿಸಿದ್ದಾರೆ.


ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡುವ ನಿಟ್ಟಿನಲ್ಲಿ ಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

Join Whatsapp