ಮಂಗಳೂರು | ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಕೆಲವರ ಸ್ಥಿತಿ‌ ಗಂಭೀರ

Prasthutha|

- Advertisement -

ಮಂಗಳೂರು: ನಗರದ ಸಿಟಿ ಹಾಸ್ಪಿಟಲ್ ಗೆ ಸೇರಿರುವ ಸಿಟಿ ನರ್ಸಿಂಗ್ ಕಾಲೇಜ್ ನ ನೂರಾರು ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಇಂದು ರಾತ್ರಿ ಬೆಳಕಿಗೆ ಬಂದಿದೆ.

ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ.

- Advertisement -

ವಿದ್ಯಾರ್ಥಿಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಮಾಹಿತಿ ಲಭಿಸಿದೆ. ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp