ಮಂಗಳೂರು | ವೈದ್ಯಲೋಕದಲ್ಲಿ ಗಾಂಜಾ ಪ್ರಕರಣ: 13 ಮಂದಿಗೆ ಜಾಮೀನು

Prasthutha|

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 13 ಮಂದಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಬಂಧಿತ24 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ 5 ಮಂದಿ ವೈದ್ಯರು, 17 ಮಂದಿ ವೈದ್ಯ ವಿದ್ಯಾರ್ಥಿಗಳಾಗಿದ್ದಾರೆ. ಇದೀಗ ಪ್ರಥಮ ಹಂತದಲ್ಲಿ ಬಂಧಿತರಾಗಿರುವ 13 ಮಂದಿಗೆ ನ್ಯಾಯಾಲಯ ಜಾಮೀನು ನೀಡಿದೆ.

- Advertisement -