ಮಂಗಳೂರು | ಚಿನ್ನದ ಅಂಗಡಿಯಲ್ಲಿ ಸಿಬ್ಬಂದಿಗೆ ಚೂರಿ ಇರಿತ ಪ್ರಕರಣ : ಆಟೋ ಚಾಲಕನ ವಿಚಾರಣೆ

Prasthutha|

ಮಂಗಳೂರು: ನಗರದ ಹಂಪನ ಕಟ್ಟೆಯ ಚಿನ್ನದ ಅಂಗಡಿಯಲ್ಲಿ ಸಿಬ್ಬಂದಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

- Advertisement -


ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್’ನಲ್ಲಿ ಸಿಬ್ಬಂದಿಯಾಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಶುಕ್ರವಾರ ಸಂಜೆ ಮುಸುಕುಧಾರಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿ, ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು.


ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Join Whatsapp