ಬೆಂಗಳೂರು: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ನಡೆದಿತ್ತು. ಈ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಈ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರವು ಪೊಲೀಸರ ತಪ್ಪು ಇಲ್ಲ ಎಂದು ಶುಕ್ರವಾರ ಮಾಹಿತಿ ನೀಡಿದೆ.
ಮಂಗಳೂರು ಗೋಲಿಬಾರ್ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ಮುಕ್ತಾಯವಾಗಿದೆ . ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ಮ್ಯಾಜಿಸ್ಟ್ರೇಟ್ ತನಿಖಾ ವರದಿ ಹೇಳಿದೆ. ಆ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಂಡಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದ್ದಾರೆ.