ಮಂಗಳೂರು: ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕರಾದ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.