Home ಟಾಪ್ ಸುದ್ದಿಗಳು ಮಂಗಳೂರು | ನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವ: ಸಚಿವ ಝಮೀರ್

ಮಂಗಳೂರು | ನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವ: ಸಚಿವ ಝಮೀರ್

‘ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ, ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ’
ಮಂಗಳೂರು: ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ, ಒಕ್ಕಲಿಗರಿಗೆ ಯಾವ ಹೇಳಿಕೆಯೂ ನೀಡಿಲ್ಲ. ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ ಎಂದ ಜಮೀರ್ ಅಹ್ಮದ್ ಖಾನ್, ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ ಎಂದು ಹೇಳಿದರು.
ಕರಿಯಾ ನಿಂದನೆ ವಿಚಾರವಾಗಿ ಮಂಗಳೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ, ಕುಮಾರಸ್ವಾಮಿ ಮುಸ್ಲಿಮರು ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ಓಟ್ ಬೇಡ ಅಂತಾ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ? ಇದು ಎಷ್ಟು ಸರಿ ಅಂತ ಕೇಳಿದ್ದು ಎಂದು ಹೇಳಿದರು.

ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವರು ಅಂತಾ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ಓಟ್ ಕೇಳುತ್ತೀರಿ? ನಿನ್ನೆ ಕುಮಾರಸ್ವಾಮಿ ಅದೇ ಮಾತು ಹೇಳಿದ್ದಾರೆ ಎಂದ ಜಮೀರ್ ಅಹ್ಮದ್ ಖಾನ್, ಹೌದು ಸ್ವಾಮಿ ನಾವು ಬಡವರು ಅವರ ಬಳಿ ಯಾಕೆ ಓಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ಪ್ರಶ್ನೆ ನಂದು, ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದು ಹೇಳಿದರು.

Join Whatsapp
Exit mobile version