ಮಂಗಳೂರುಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಇಲ್ಲ ಎಂದು ಸಂಘಪರಿವಾರ ಬ್ಯಾನರ್ ಹಾಕಿದ್ದು, ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.
ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಸಂಘಪರಿವಾರ ಬ್ಯಾನರ್ ಹಾಕಿದ್ದು, ಅದರಲ್ಲಿ ವಿಗ್ರಹಾರಾಧನೆ ಹರಾಂ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬ್ಯಾನರ್ ಹಾಕಲಾಗಿದೆ.
ಬ್ಯಾನರ್ ಹಾಕಿದ್ದ ಬಗ್ಗೆ ಪೊಲೀಸರ ಗಮನಕ್ಕೆ ಬಂದಿದ್ದು, ತಕ್ಷಣ ತೆರವುಗೊಳಿಸಿದ್ದಾರೆ.
ಈ ಮಧ್ಯೆ ಕೆಲವು ಸಂಘಪರಿವಾರದ ಕಾರ್ಯಕರ್ತರು ಆಗಮಿಸಿ ಉತ್ತರ ಭಾರತ ಮೂಲದ ನಾಲ್ಕೈದು ಮುಸ್ಲಿಮ್ ವ್ಯಾಪಾರಿಗಳನ್ನು ವ್ಯಾಪಾರ ಮಾಡದಂತೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.