ನವದೆಹಲಿ : ಮಂಗಳೂರಿನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿಯ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎಂ.ಎಂ.ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.
ಮಂಗಳೂರಿನಲ್ಲಿ ವೈದ್ಯಕೀಯ ವಿದಾಭ್ಯಾಸ ಮಾಡುತ್ತಿದ್ದ ಕೇರಳ ಮೂಲಕ ರೋಹಿತ್ ರಾಧಾಕೃಷ್ಣನ್ ಅವರ ಮೃತದೇಹ 2014ರ ಮಾ.23ರಂದು ತಣ್ಣೀರುಬಾವಿ ಬೀಚ್ ನ ರಸ್ತೆ ಬದಿ ಪೊದೆಗಳ ಬಳಿ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ವಕೀಲರಾಗಿರುವ ರೋಹಿತ್ ಅವರ ತಂದೆ ಎಂ.ಎಸ್.ರಾಧಾಕೃಷ್ಣನ್ ಅವರು ಪ್ರಕರಣದ ಬಗ್ಗೆ ಸಂದೇಹ ವ್ಯಕ್ತಪಡಿಸಿ ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು. ಬಳಿಕ ಈ ಬಗ್ಗೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ತನಿಖೆಯ ಬಗ್ಗೆಯೂ ರಾಧಾಕೃಷ್ಣನ್ ಅವರು ಅಸಮಾಧಾನ ವ್ಯಕ್ತಪಡಿಸಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ.