ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಒಂದೇ ತರಗತಿಯ ಅಪ್ರಾಪ್ತರು
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಲಿಪ್ ಲಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ
ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಾವುಟಗುಡ್ಡೆ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈಗಾಗಲೇ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನು ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಪ್ರಕರಣದಲ್ಲಿ ಒಟ್ಟು 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ಮೂವರು ಸಂತ್ರಸ್ತ ವಿದ್ಯಾರ್ಥಿನಿಯರು ಮತ್ತು ದೌರ್ಜನ್ಯ ಎಸಗಿದ ವಿದ್ಯಾರ್ಥಿಗಳು ಒಂದೇ ತರಗತಿಯ ಅಪ್ರಾಪ್ತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.