ಮಂಗಳೂರು | ಕೊರಗಜ್ಜನ ಗುಡಿಯ ಎದುರು ಕಾಂಡೋಮ್ ಇಟ್ಟ ಪ್ರಕರಣ: ಓರ್ವ ವಶಕ್ಕೆ !

Prasthutha|

ಮಂಗಳೂರು: ನಗರದ ಮಾರ್ನಮಿಕಟ್ಟೆ ಬಳಿ ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

- Advertisement -

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಿಸಿಟಿವಿಯಲ್ಲಿ, ಓರ್ವ ವ್ಯಕ್ತಿ ಕೊರಗಜ್ಜನ ಗುಡಿಗೆ ಬಂದು ವಸ್ತುವೊಂದನ್ನು ಇಟ್ಟು ಹೋಗುತ್ತಿರುವುದು ದಾಖಲಾಗಿದ್ದು, ಇದರ ಆಧಾರದಲ್ಲಿ ವ್ಯಕ್ತಿಯನ್ನು ವಶಕ್ಕೆ  ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



Join Whatsapp