ಮಂಗಳೂರು: ಮೃತಪಟ್ಟ ಯುವಕನ ವಿಮಾ ಹಣವನ್ನು ವಂಚಿಸಿದ ವಕೀಲ

Prasthutha: December 1, 2021

ಮಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ 15 ಲಕ್ಷ ರೂ. ವಿಮಾ ಹಣವನ್ನು ವಂಚಿಸಿದ ವಕೀಲನ ವಿರುದ್ಧ ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ವಂಚಿಸಿದ ವಕೀಲನನ್ನು ಡಿ. ಪದ್ಮನಾಭ ಎಂದು ಗುರುತಿಸಲಾಗಿದೆ.


ದಿವಾಕರ ಆಚಾರ್ಯ ಮತ್ತು ಶಕುಂತಲಾ ದಂಪತಿಯ ಪುತ್ರ ಶರಣ್ ಬೆಂಗಳೂರಿನ ಪೀಣ್ಯದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ, ಆದರೆ ಯುವಕನ ಇನ್ಸೂರೆನ್ಸ್ ಹಣಕ್ಕೆ ಕನ್ನ ಹಾಕಿ ಕಂಪನಿಯ ನಕಲಿ ಖಾತೆ ಸೃಷ್ಟಿಸಿ 15 ಲಕ್ಷ ಕಂಪನಿ ವಿಮಾ ಹಣ ಪದ್ಮನಾಭ ಪಡೆದಿದ್ದ ಎನ್ನಲಾಗಿದೆ.


ವಂಚನೆಗೆ ಒಳಗಾದ ಸಂತ್ರಸ್ತ ಕುಟುಂಬ, ವಕೀಲ ಪದ್ಮನಾಭ ವಿರುದ್ಧ ಮಂಗಳೂರಿನ ಬಂದರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!