ಮಂಗಳೂರು | ನಾಳೆ ಪುರಭವನದಲ್ಲಿ “ಪ್ರವಾದಿ ಮುಹಮ್ಮದ್(ಸ)ರನ್ನು ಅರಿಯೋಣ” ವಿಚಾರಗೋಷ್ಠಿ

Prasthutha|

ಮಂಗಳೂರು: ಅಕ್ಟೋಬರ್ 7ರಂದು ಮಂಗಳೂರಿನ ಪುರಭವನದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ (ಜೆಐಎಚ್) ರಾಜ್ಯಾದ್ಯಂತ ಹಮ್ಮಿಕೊಂಡಿರುವ ಸೀರತ್ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸರ್ವಧರ್ಮೀಯ ಬಾಂಧವರಿಗಾಗಿ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ದ.ಕ. ಜಿಲ್ಲಾ ಸಂಚಾಲಕ ಅಮೀನ್ ಅಹ್ಸನ್ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಹಿತಚಿಂತನೆ: ಪ್ರವಾದಿ ಮುಹಮ್ಮದ್(ಸ) ಚಿಂತನೆಗಳ ಬೆಳಕಿನಲ್ಲಿ” ಎಂಬ ವಿಷಯದಲ್ಲಿ ಅಕ್ಟೋಬರ್ 7ರ ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಈ ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಚಿಂತಕರು, ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತ, ಕೆಪಿಸಿಸಿ ರಾಜ್ಯ ವಕ್ತಾರ ನಿಕೇತ್ ರಾಜ್ ಮೌರ್ಯ, ಹೋಲಿ ಕ್ರಾಸ್ ಚರ್ಚ್ ನ ಧರ್ಮಗುರುಗಳಾದ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ. ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞಿಯವರು ವಿಷಯ ಮಂಡಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



Join Whatsapp