ಮಂಗಳೂರು | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Prasthutha|

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ನಗರ ಮಹಿಳಾ ಪೊಲೀಸರು ಬಂಧಿಸಿದ್ದಾರೆ.

- Advertisement -

ಮಂಜೇಶ್ವರ ಸಮೀಪದ ಕುಂಜತ್ತೂರಿನ ಆರೋಪಿ ಗೌತಮ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

17ರ ಹರೆಯದ ಬಾಲಕಿಯನ್ನು ಮದುವೆ ಮಾಡಿಕೊಡಬೇಕು ಎಂದು ಬಾಲಕಿಯ ಮನೆಯವರಿಗೆ ಬೆದರಿಕೆ ಹಾಕಿದ್ದ ‌ ಎನ್ನಲಾಗಿದೆ. ಇದರಿಂದ ನೊಂದ ಯುವತಿಯ ತಾಯಿ ದೂರು ನೀಡಿದ್ದರು. ಅದರಂತೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಗೌತಮ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ.

Join Whatsapp