ಮಂಗಳೂರು : ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ; ಸಂಘಪರಿವಾರದ ಸದಸ್ಯನೂ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು

Prasthutha|

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಸಂಘಪರಿವಾರದ ಸದಸ್ಯನೂ ಸೇರಿದಂತೆ ನಾಲ್ವರ ವಿರುದ್ಧ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ  ಪ್ರಕರಣ ದಾಖಲಾಗಿದೆ.

- Advertisement -

ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿನಿಗೆ ಮೂಡುಶೆಡ್ಡೆ-ವಾಮಂಜೂರು ನಿವಾಸಿ, ಸಂಘಪರಿವಾರದ ಸದಸ್ಯನೂ ಆಗಿರುವ ಚರಣ್ ಹಾಗೂ ಆತನ ಮೂವರು ಸ್ನೇಹಿತರು ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ವಿದ್ಯಾರ್ಥಿನಿಗೆ  ಮೆಸೇಜ್ ಮತ್ತು ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ ಯಾರಿಗೂ ಹೇಳಬಾರದು ಎಂದು ಬೆದರಿಸಿದ್ದಾರೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ.

Join Whatsapp