Home ಟಾಪ್ ಸುದ್ದಿಗಳು ಮಂಗಳೂರು | ಶಾಸಕ ಹರೀಶ್ ಪೂಂಜಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಗಳೂರು | ಶಾಸಕ ಹರೀಶ್ ಪೂಂಜಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಗಳೂರು: ಶಾಸಕ ಹರೀಶ್ ಪೂಂಜಾ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಕಿಡಿಕಾರಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ನ ಒತ್ತಡ ಅಂದರೆ ಎನು ಅರ್ಥ?, ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ಪ್ರಕರಣ ಅಲ್ಲ, ಈ ಕೇಸ್ನಲ್ಲಿ 7 ವರ್ಷ ಜೈಲು ವಾಸ ಇದೆ. ಆತ ಎಂಎಲ್ಎ ಎಂದು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Join Whatsapp
Exit mobile version