ಮಂಗಳೂರು | ಅನೈತಿಕ ಪೊಲೀಸ್‌ ಗಿರಿ ಪ್ರಕರಣ: ಇಬ್ಬರು ಸಂಘಪರಿವಾರದ ಕಾರ್ಯಕರ್ತರ ಬಂಧನ

Prasthutha|

- Advertisement -

ಮಂಗಳೂರು: ಯುವಕ ಹಾಗೂ ಯುವತಿ ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದಾಗ ಸಂಘಪರಿವಾರದ ಕಾರ್ಯಕರ್ತರು ಹಿಂಬಾಲಿಸಿ ತಡೆದು ಅನೈತಿಕ ಪೊಲೀಸ್‌ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ.

- Advertisement -

ನಿನ್ನೆ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ತು ಎಂಬಲ್ಲಿನ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಇಬ್ಬರು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಉದ್ಯೋಗಿಗಳನ್ನು ತಡೆದು “ನೀವು ಹಿಂದೂ -ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ?” ಎಂದು ಪ್ರಶ್ನಿಸಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ ಎನ್ನಲಾಗಿದೆ. ಹೊಯ್ಸಳ ವಾಹನದ ಪೊಲೀಸರು ಇಬ್ಬರು ಉದ್ಯೋಗಿಗಳನ್ನು ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp