Home ಕರಾವಳಿ ಮಂಗಳೂರು ವಾಹನ ಸವಾರರೇ ಎಚ್ಚರ! ಈ ಪ್ರದೇಶಗಳಲ್ಲಿ ಹಾರ್ನ್ ಮಾಡಿದ್ರೆ 2000 ರೂ.ವರೆಗೂ ದಂಡ

ಮಂಗಳೂರು ವಾಹನ ಸವಾರರೇ ಎಚ್ಚರ! ಈ ಪ್ರದೇಶಗಳಲ್ಲಿ ಹಾರ್ನ್ ಮಾಡಿದ್ರೆ 2000 ರೂ.ವರೆಗೂ ದಂಡ

ಮಂಗಳೂರು: ಮಂಗಳೂರು ನಗರ ಮತ್ತು ಕೆಲವು ಪ್ರದೇಶಗಳನ್ನು ಶಬ್ದಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಾರ್ನ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಹಾರ್ನ್ ಹಾಕಿದವರ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಯಾವೆಲ್ಲಾ ಪ್ರದೇಶಗಳಲ್ಲಿ ಹಾರ್ನ್ ನಿಷೇಧ ಎಂಬ ಮಾಹಿತಿ ವಾಹನ ಸವಾರರಿಗೆ ಅಗತ್ಯ ಇರಬೇಕಾಗಿದೆ. ಯಾವೆಲ್ಲಾ ಪ್ರದೇಶಗಳೆಂದರೆ..

ಹಾರ್ನ್ ನಿಷೇಧಿತ ಪ್ರದೇಶಗಳು ಹೀಗಿವೆ

  1. ರಾವ್ ಆಯಂಡ್ ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
  2. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್‌ವರೆಗೆ.
  3. ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ.

ಹಂಪನಕಟ್ಟೆ ಜಂಕ್ಷನ್‌

  1. ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್‌ವರೆಗಿನ ಪ್ರದೇಶ.
  2. ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್‌ನಿಂದ ಮುತ್ತಪ್ಪ ಗುಡಿಯವರೆಗೆ.
  3. ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನಸೌಧ ಕಟ್ಟಡದವರೆಗೆ.
  4. ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
  5. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
  6. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
  7. ಬಾವುಟ ಗುಡ್ಡದಿಂದ ಅಂಬೇಡ್ಕರ್ ವೃತ್ತದವರೆಗೆ.
  8. ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್ ತಿರುವಿನವರೆಗೆ

ಮಂಗಳೂರು ನಗರ ಮಾತ್ರವಲ್ಲ,

  1. ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್‌ ಪ್ರದೇಶ
  2. ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್‌ ಪ್ರದೇಶ

ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದ್ದು,. ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1000 ರೂಪಾಯಿ ದಂಡ ಹಾಗೂ ಎರಡನೆಯ ಹಾಗೂ ಬಳಿಕದ ಪ್ರತಿ ಉಲ್ಲಂಘನೆಗೂ 2000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp
Exit mobile version