ಮಂಗಳೂರು | ಮುಸ್ಲಿಮ್ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ವಿರುದ್ಧ FIR

Prasthutha|

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ಬಸ್ಸಿನಿಂದ ಇಳಿಸಿ ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಎಫ್’ಐಆರ್ ದಾಖಲಾಗಿದೆ.

- Advertisement -


ಆರೋಪಿಗಳ ಐಪಿಸಿ ಕಲಂ 504,506,323,324,342,352 ಹಾಗೂ 34 IPC ಕಲಂಗಳಡಿ ಪ್ರಕರಣ ದಾಖಲಾಗಿದೆ.

ಮೇಸ್ತ್ರಿ ಕೆಲಸ ಮಾಡುತ್ತಿರುವ ಇಸಾಕ್ ಅವರು ಬುಧವಾರ ಬೆಳಗ್ಗೆ ಬಿ.ಸಿ.ರೋಡ್’ನಿಂದ ಮೂಡಬಿದ್ರೆಗೆ ಹೋಗುವಾಗ ಖಾಸಗಿ ಬಸ್ ಕಂಡೆಕ್ಟರ್ ಮತ್ತು ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿರುವ ಇಸಾಕ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯನ್ನು ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದವು. ಇದೀಗ ಬಂಟ್ವಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.



Join Whatsapp