ಮಂಗಳೂರು ಉತ್ತರ: ನಾಳೆ ಇನಾಯತ್ ಅಲಿ ನಾಮಪತ್ರ ಸಲ್ಲಿಕೆ

Prasthutha|

- Advertisement -

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.


ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ತೀವ್ರ ಪೈಪೋಟಿ ಉಂಟಾದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ತೀವ್ರ ಬಿಕ್ಕಟ್ಟು ಎದುರಿಸಿದರು. ಅಂತಿಮವಾಗಿ ಇನಾಯತ್ ಅಲಿಯವರ ಹೆಸರನ್ನು ಅಂತಿಮಗೊಳಿಸಿ ನಾಮಪತ್ರ ಸಲ್ಲಿಕೆಗೆ ಸೂಚಿಸಿದ್ದಾರೆ.

- Advertisement -


ಮತ್ತೋರ್ವ ಟಿಕೆಟ್ ಆಕಾಂಕ್ಷಿ ಮೊಯ್ದೀನ್ ಬಾವ ಅವರು ಬಂಡಾಯ ಏಳುವ ಸಾಧ್ಯತೆ ಇರುವುದರಿಂದ ಕೊನೆಯ ಕ್ಷಣದವರೆಗೂ ಈ ಕ್ಷೇತ್ರದ ಟಿಕೆಟ್ ಘೋಷಿಸದೆ ನೇರವಾಗಿ ಇನಾಯತ್ ಅಲಿಯವರಿಗೆ ಕರೆ ಮಾಡಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಗುರುವಾರ ಬೆಳಗ್ಗೆ 9:30ಕ್ಕೆ ಕಾವೂರು ಜಂಕ್ಷನ್ ನಲ್ಲಿ ಬಹಿರಂಗ ಸಭೆ ನಡೆಯಲಿದ್ದು ಮಧ್ಯಾಹ್ನ 12:30 ಕ್ಕೆ ಇನಾಯತ್ ಅಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಇನಾಯತ್ ಅಲಿಯವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Join Whatsapp