ಮಂಗಳೂರು: ವಿಷಾಹಾರ ಸೇವಿಸಿದ ನರ್ಸಿಂಗ್ ವಿದ್ಯಾರ್ಥಿಗಳ ಪೈಕಿ ಹಲವರು ಚೇತರಿಕೆ

Prasthutha|

ಮಂಗಳೂರು: ನಗರದ ಸಿಟಿ ಹಾಸ್ಪಿಟಲ್ ಗೆ ಸೇರಿರುವ ಸಿಟಿ ನರ್ಸಿಂಗ್ ಕಾಲೇಜ್ ನಲ್ಲಿ ಆಹಾರ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದ ವಿದ್ಯಾರ್ಥಿಗಳಲ್ಲಿ ಹಲವರು ಚೇತರಿಸಿಕೊಳ್ಳುತ್ತಿದ್ದಾರೆ.

- Advertisement -

ಶಕ್ತಿನಗರದ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ವಾಂತಿ ಮಾಡಿ ಅಸ್ವಸ್ಥರಾಗಿದ್ದರು. ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲವು ವಿದ್ಯಾರ್ಥಿಗಳಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವರದಿಯಾಗಿದೆ.