Home ಟಾಪ್ ಸುದ್ದಿಗಳು ಮಂಗಳೂರು | ‘ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ’: ವಿ.ಸೋಮಣ್ಣ

ಮಂಗಳೂರು | ‘ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ’: ವಿ.ಸೋಮಣ್ಣ

ಮಂಗಳೂರು: ‘ಹಳೆ ಸಿದ್ದರಾಮಯ್ಯನವರು ಕಳೆದುಹೋಗಿದ್ದಾರೆ’ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.


ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಸಿದ್ದರಾಮಯ್ಯ ಅವರ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಹಳೆಯ ಸಿದ್ದರಾಮಯ್ಯನವರು ಇವತ್ತು ಇಲ್ಲ. ಇವತ್ತು ಇರುವ ಸಿದ್ದರಾಮಯ್ಯನವರ ವರ್ತನೆ ನೋಡಿ ನನಗೂ ಒಂದು ರೀತಿ ಅನುಮಾನ ಮೂಡಿದೆ’ ಎಂದರು.


‘ವಾಸ್ತವವನ್ನು ಯಾರೂ ಮುಚ್ಚಿಡಲು ಆಗಲ್ಲ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದರೆ ಯಾರಿಗೂ ಗೊತ್ತಾಗಲ್ಲ ಎಂದು ಯಾರೂ ತಿಳಿದುಕೊಳ್ಳಬಾರದು’ ಎಂದರು.

Join Whatsapp
Exit mobile version