Home ಕರಾವಳಿ ಮಂಗಳೂರು ಹೈ ಅಲರ್ಟ್: ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್

ಮಂಗಳೂರು ಹೈ ಅಲರ್ಟ್: ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್

0

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ ಎಂದು ತಿಳಿದು ಬಂದಿದೆ.


ಹೋಟೆಲ್, ಪಬ್, ಬಾರ್ ಗಳು, ಫುಟ್ ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.


ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ನಾಲ್ಕು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version