ಮಂಗಳೂರು | ತಟ್ಟೆ ತೊಳೆಯುವ ವಿಚಾರದಲ್ಲಿ ಗಲಾಟೆ: ಓರ್ವನ ಹತ್ಯೆ

Prasthutha|

ಮಂಗಳೂರು: ಊಟ ಮಾಡಿ ತಟ್ಟೆ ತೊಳೆಯುವ ವಿಚಾರದಲ್ಲಿ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್’ನಲ್ಲಿ ನಡೆದಿದೆ.

- Advertisement -


ಕೂಲಿ ಕಾರ್ಮಿಕ, ಉತ್ತರ ಪ್ರದೇಶದ ಮಹಾರಾಜ್ ಗಂಜ್ ಸಂಜಯ್ (28) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ.


ಸ್ನೇಹಿತರಾದ ಸಂಜಯ್ ಮತ್ತು ಸೋಹಾನ್ ಯಾದವ್ ನಡುವೆ ತಟ್ಟೆ ತೊಳೆಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಸೋಹನ್ ಯಾದವ್, ಸಂಜಯ್ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ ಸಂಜಯ್ ತಲೆಗೆ ಗಂಭೀರ ಗಾಯವಾಗಿದ್ದು, ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
ಆರೋಪಿ ಸೋಹನ್’ನನ್ನು ಬಜ್ಪೆ ಪೊಲೀಸರು ಮಂಗಳೂರು ರೈಲು ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ.

Join Whatsapp