ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಮಂಗಳೂರು ಪೊಲೀಸ್ ಕಮಿಷನರ್ ಆದೇಶ

Prasthutha|

ಲಾಕ್‌ಡೌನ್ ಅವಧಿಯ ವೇಳೆಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತವು ಕಾಲ ಕಾಲಕ್ಕೆ ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಆದೇಶಿಸಿದ್ದಾರೆ.

- Advertisement -

ಈ ವೇಳೆ ಕೋವಿಡ್ 19 ಎರಡನೇ ಅಲೆಯ ಸಮಯದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘನೆಗೆ ಸಂಬಂಧಪಟ್ಟಂತೆ ಪ್ರಕರಣಗಳ ಸಂಪೂರ್ಣ ವಿವರ ನೀಡಿದ್ದಾರೆ. ಮಾಸ್ಕ್ ಧರಿಸದೆ 13,578 ಪ್ರಕರಣಗಳು ದಾಖಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ 91 ಪ್ರಕರಣಗಳು ದಾಖಲಾಗಿದೆ. NDMA  ಪ್ರಕರಣಗಳು 253, Epidemic Act 286 ಪ್ರಕರಣಗಳು ಮತ್ತು 2410 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇಲ್ಲಿಯವರೆಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 92 ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಕೋವಿಡ್-19 ಬಂದಿದ್ದು ಪ್ರಸ್ತುತ 22 ಸಕ್ರಿಯ ಪ್ರಕರಣಗಳು ದಾಖಲಾಗಿರುತ್ತದೆ. ಮಾರ್ಗಸೂಚಿಗಳ ಹೆಚ್ಚು ಅರ್ಥಪೂರ್ಣ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಕೈ ಜೋಡಿಸೋಣ ಎಂದು ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.



Join Whatsapp