ಡ್ರಗ್ಸ್ ಮಾಫಿಯಾ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸರ ಕಾರ್ಯಾಚರಣೆ; ಆರೋಪಿಯ ಬಂಧನ

Prasthutha|

ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

- Advertisement -

ತಲಪಾಡಿ ಗ್ರಾಮದ ಕೆಸಿ ರೋಡ್ ಬಳಿ ಆರೋಪಿಗಳ ಮಾದಕ ವಸ್ತು ಮಾರಾಟ ಚಟುವಟಿಕೆಗಳ ಬಗ್ಗೆ ಖಚಿತವಾದ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಕಾಸರಗೋಡಿನ ಉಪ್ಪಳ ನಿವಾಸಿ ಮಹಮ್ಮದ್ ರಫೀಕ್ (40) ಎಂಬಾತನನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ 2,50,000 ರೂಪಾಯಿ ಮೌಲ್ಯದ 50 ಗ್ರಾಂ ಎಂಡಿಎಂಎ, 8,000 ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಒಟ್ಟಾರೆಯಾಗಿ ಅಂದಾಜು 2,68,500 ರೂಪಾಯಿ ಮೌಲ್ಯದ ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಡ್ರಗ್ ಪೆಡ್ಲರ್‌ಗಳು ಶಾಮೀಲಾಗಿರುವ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿರುವುದರಿಂದ, ಅಂಥವರಿಗಾಗಿ ಶೋಧ ಕಾರ್ಯ ಪ್ರಾರಂಭಿಸಲಾಗಿದೆ.

- Advertisement -

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗ್ಡೆ, ಇನ್ಸ್‌ಪೆಕ್ಟರ್ ಶಾಮ್ ಸುಂದರ್ ಎಚ್‌ಎಂ, ಪಿಎಸ್‌ಐ ರಾಜೇಂದ್ರ ಬಿ, ಸುದೀಪ್ ಎಂವಿ, ಶರಣಪ್ಪ ಭಂಡಾರಿ, ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಮಂಗಳೂರಿನಲ್ಲಿ ಮಾದಕ ವ್ಯಸನದಿಂದ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೊಲೀಸರು ಮಾದಕ ದ್ರವ್ಯ ದಂಧೆಕೋರರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.



Join Whatsapp