Home ಕರಾವಳಿ ಮಂಗಳೂರಿನಲ್ಲಿ ಖಾಸಗಿ ಬಸ್ ಬೆಂಕಿಗೆ ಆಹುತಿ!

ಮಂಗಳೂರಿನಲ್ಲಿ ಖಾಸಗಿ ಬಸ್ ಬೆಂಕಿಗೆ ಆಹುತಿ!

ಮಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿಯಾದ ಘಟನೆ ನಗರದ ಮಂಗಳಾದೇವಿಯಲ್ಲಿ ನಡೆದಿದೆ. ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಬಸ್ ಭಾಗಶಃ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ಬೆಂಕಿ ತಗುಲಿರುವ ಬಸ್ಸಿನ ಹತ್ತಿರ ಬೇರೆ ಕೆಲವು ಬಸ್ಸುಗಳು ಇದ್ದರೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಲಾಕ್ ಡೌನ್ ನಿಂದಾಗಿ ಬಸ್ಸುಗಳನ್ನೆಲ್ಲಾ ನಗರದ ಮಂಗಳಾದೇವಿ ಹತ್ತಿರದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು.

ಬಸ್ಸಿಗೆ ಶಾರ್ಟ್ ಸರ್ಕ್ಯೂಟ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನೆಯ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Join Whatsapp
Exit mobile version