ಮಂಗಳೂರು: ವೇಶ್ಯಾವಾಟಿಕೆ ದಂಧೆ| ಮತ್ತೆ 7 ಮಂದಿ ಬಂಧನ

Prasthutha|

- Advertisement -

ಮಂಗಳೂರು: ನಗರದ ನಂದಿಗುಡ್ಡೆ ಅಪಾರ್ಟ್ ಮೆಂಟ್ ನಲ್ಲಿ ಮಾನವ ಕಳ್ಳ ಸಾಗಣಿಕೆ ವೇಶ್ಯಾವಾಟಿಕೆ ಚಟುವಟಿಕೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮತ್ತೆ 7 ಮಂದಿಯನ್ನು ಬಂಧಿಸಿದ್ದಾರೆ.  

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಈ ಹಿಂದೆ ಮಂಗಳೂರು ಪೊಲೀಸರು ಬಂಧಿಸಿದ್ದು, ಒಟ್ಟು 10 ಮಂದಿ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.

- Advertisement -

ಅಪ್ರಾಪ್ತ ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ದಾಳಿ ವೇಳೆ ಬಾಲಕಿ ಮೇಲೆ ಲೈಂಗಿಕ ಕೃತ್ಯ ಬಯಲಾಗಿತ್ತು.

ಬಾಲಕಿ ಮೇಲೆ ಒಟ್ಟು ಆರು ಲೈಂಗಿಕ ಪ್ರಕರಣ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ನಾಲ್ಕು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

Join Whatsapp