Home ಕರಾವಳಿ ಮಂಗಳೂರು: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ.

ಈತ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು,
ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆ 5.30ರ ಸುಮಾರಿಗೆ ತಾಯಿ ಕೆಲಸದಲ್ಲಿಂದ ಮಗನಿಗೆ ಕರೆ ಮಾಡಿದ್ದರು. ಕೌಶಲ್‌ ಕರೆ ಸ್ವೀಕರಿಸಲಿಲ್ಲ. ತಾಯಿ ಕೂಡಲೇ ಹರ್ಷದ್‌ ನ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಮಹಡಿಯ ಕೋಣೆಯಲ್ಲಿ ನೋಡಿದಾಗ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version