ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಸಾವು

Prasthutha|

- Advertisement -

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ ರಾಜು ಮತ್ತು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ದೇವರಾಜು ಎಂದು ಗುರುತಿಸಲಾಗಿದೆ.

- Advertisement -

ಇಂದು ಬೆಳಗ್ಗೆ ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂ ನಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.

Join Whatsapp